ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆ
Nannuru-team
7/15/2025

ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆ - ದಶಕಗಳಿಂದ ಕಾತರಿಸುತ್ತಿದ್ದ ಶರಾವತಿ ಹಿನ್ನೀರಿನ ಮಕ್ಕಳ ಕನಸು ನನಸಾಗಿದೆ. ಇಂದು ಕೇಂದ್ರ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರು ಹೊಳೆಬಾಗಿಲಿನಲ್ಲಿ ಅಂಬಾರಗೋಡ್ಲು-ಕಳಸವಳ್ಳಿ ಸಂಪರ್ಕಿಸುವ ದೇಶದ ಎರಡನೇ ಅತಿ ಉದ್ದದ ಕೇಬಲ್ ಬ್ರಿಡ್ಜ್ ಆಗಿರುವ ಸಿಗಂದೂರು ಸೇತುವೆಯನ್ನು ಲೋಕಾರ್ಪಣೆ ಮಾಡಿ, ನೂತನ ಸೇತುವೆಯಲ್ಲೇ ಸಂಚರಿಸಿ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ತಾಯಿಯ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ, ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ, ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ, ಸಂಸದರಾದ ಶ್ರೀ ಬಿ. ವೈ. ರಾಘವೇಂದ್ರ, ಶಾಸಕರು, ಮಾಜಿ ಶಾಸಕರು, ಜನಪ್ರತಿನಿಧಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು. ಇಷ್ಟುದಿನ ಲಾಂಚಾರ್ ಮೂಲಕವೆ ತೆರಳಬೇಕಿತ್ತು, ಹಿನ್ನೆಲೆ: ಸಿಗಂದೂರು ಕ್ಷೇತ್ರವು ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಕರೂರು ಹೊಬಳಿಯ ಶರಾವತಿಯ ಹಿನ್ನಿರಿನ ಮಡಿಲಲ್ಲಿ ಹಚ್ಚಹಸಿರಿನ ಸುಂದರವಾದ ಮಡಿಲಲ್ಲಿ ಇದೆ, ಪ್ರವಾಸಿಗರ ನೆಚ್ಚಿನ ಸ್ಥಳವಾಗಿದೆ,




